ಬೆಳಗಾವಿಯಲ್ಲಿ ಅ.4ರಂದು ಶಿವಶರಣ ಹೂಗಾರ ಮಾದಯ್ಯನವರ ಜಯಂತ್ಯೋತ್ಸವ..

ಬೆಳಗಾವಿಯಲ್ಲಿ ಅ.4ರಂದು ಶಿವಶರಣ ಹೂಗಾರ ಮಾದಯ್ಯನವರ ಜಯಂತ್ಯೋತ್ಸವ..

ಸಮುದಾಯದ ಸಾಧಕರಿಗೆ ಪ್ರತಿಭಾ ಪುರಸ್ಕಾರ..

ಬೆಳಗಾವಿ : ಬೆಳಗಾವಿ ಜಿಲ್ಲಾ ಹೂಗಾರ, ಗುರುವ, ಜೀರ ಹಾಗೂ ಪೂಜಾರ ಸಮಾಜ ಸೇವಾ ಸಂಘದ ವತಿಯಿಂದ ಬಸವಾಧಿ ಶಿವಶರಣ ಹೂಗಾರ ಮಾದಯ್ಯನವರ ಜಯಂತ್ಯೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಅಕ್ಟೋಬರ್‌ 4ರಂದು ಬೆಳಗಾವಿಯಲ್ಲಿ ಆಯೋಜಿಸಲಾಗಿದೆ.

ಅಕ್ಟೋಬರ್‌ 4ರಂದು ಬೆಳಿಗ್ಗೆ 9.30ಕ್ಕೆ ನಗರದ ರಾಣಿ ಚನ್ನಮ್ಮ ವೃತ್ತದಿಂದ ಶಿವಶರಣ ಹೂಗಾರ ಮಾದಯ್ಯನವರ ಭಾವಚಿತ್ರದೊಂದಿಗೆ ಸಕಲ ವಾದ್ಯಮೇಳಗಳ ಸಹಿತ ಭವ್ಯ ಮೆರವಣಿಗೆ ನಡೆಯಲಿದೆ. ಮೆರವಣಿಗೆಯು ಕುಮಾರ ಗಂಧರ್ವ ರಂಗಮಂದಿರದವರೆಗೆ ಸಾಗಲಿದೆ.

ನಂತರ ಬೆಳಿಗ್ಗೆ 11 ಗಂಟೆಗೆ ಕುಮಾರ ಗಂಧರ್ವ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಮಾಜದ ಪ್ರತಿಭಾವಂತರನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುವುದು.

ಕಾರ್ಯಕ್ರಮಕ್ಕೆ ಪರಮಪೂಜ್ಯ ಶ್ರೀ ಯತೀಶ್ವರಾನಂದ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯ ಇರಲಿದೆ. ಉದ್ಘಾಟಕರಾಗಿ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಹಕಾರ ಸಚಿವ ಲಕ್ಷ್ಮಣ ಸವದಿ ಪಾಲ್ಗೊಳ್ಳಲಿದ್ದಾರೆ.

ಗೌರವಾನ್ವಿತ ಅತಿಥಿಗಳಾಗಿ ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಸೇರಿದಂತೆ ವಿಶೇಷ ಆಹ್ವಾನಿತರಾಗಿ ಅಶೋಕ ಪಟ್ಟಣ, ಪ್ರಕಾಶ ಹುಕ್ಕೇರಿ, ಭರಮಗೌಡ ಕಾಗೆ, ಮಹಾಂತೇಶ ಕೌಜಲಗಿ, ಪ್ರಿಯಾಂಕಾ ಜಾರಕಿಹೊಳಿ ಹಾಗೂ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಶಿಫ್‌ (ರಾಜು) ಶೇಠ ಸೇರಿದಂತೆ ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ.

ಸಮಾಜದ ಹಿರಿಯರು, ಮುಖಂಡರು, ಪದಾಧಿಕಾರಿಗಳು, ವಿವಿಧ ಕ್ಷೇತ್ರಗಳ ಸಾಧಕರು ಹಾಗೂ ಸಮಾಜದ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜಯಂತ್ಯೋತ್ಸವವನ್ನು ಯಶಸ್ವಿಗೊಳಿಸಬೇಕೆಂದು ಸಂಘದ ವತಿಯಿಂದ ಮನವಿ ಮಾಡಲಾಗಿದೆ.

ಈ ಸುದ್ದಿಗೊಷ್ಟಿಯಲ್ಲಿ ಸಮಾಜದ ಮುಖಂಡರುಗಳಾದ ಶಿವಾನಂದ ಹೂಗಾರ, ಶಿವಲಿಂಗಪ್ರಭು ಹೂಗಾರ, ಡಿ ಎಂ ಹೂಗಾರ, ಎಂ ವಿ ಗುರವ, ಮಹಾದೇವ ಹೂಗಾರ ಹಾಗೂ ಸಮಾಜದ ಇತರ ಪ್ರಮುಖರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *