ನಾನಾ ಪಾಟೇಕರ್ ನಿಧನಕ್ಕೆ ಜಗದೀಶ್ ಶೆಟ್ಟರ್ ಸಂತಾಪ..
ಬೆಳಗಾವಿ : ಭಾರತೀಯ ಚಿತ್ರರಂಗದ ಹಿರಿಯ ನಟ, ರಂಗಭೂಮಿ ಕಲಾವಿದ ಹಾಗೂ ಸಮಾಜಮುಖಿ ಚಿಂತನೆಯ ನಾನಾ ಪಾಟೇಕರ್ ಅವರ ನಿಧನದ ಸುದ್ದಿ ಅತ್ಯಂತ ದುಃಖ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ತಮ್ಮ ವಿಶಿಷ್ಟ ಅಭಿನಯ, ಪ್ರಬಲ ಸಂಭಾಷಣೆ ಹಾಗೂ ಅದ್ಭುತ ಕಲಾ ಪ್ರತಿಭೆಯ ಮೂಲಕ ನಾನಾ ಪಾಟೇಕರ್ ಅವರು ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಹಲವು ದಶಕಗಳ ಕಾಲ ತಮ್ಮ ಅಭಿನಯದ ಮೂಲಕ ಕೋಟ್ಯಂತರ ಅಭಿಮಾನಿಗಳ ಮನಸ್ಸಿನಲ್ಲಿ ಅಚ್ಚಳಿಯದ ಸ್ಥಾನ ಪಡೆದಿದ್ದರು.
ಕಲಾವಿದರಾಗಿ ಮಾತ್ರವಲ್ಲದೆ, ಸಮಾಜ ಸೇವೆಯಲ್ಲಿಯೂ ನಾನಾ ಪಾಟೇಕರ್ ಅವರು ತಮ್ಮದೇ ಆದ ಕೊಡುಗೆ ನೀಡಿದ್ದರು. ಸಂಕಷ್ಟದಲ್ಲಿರುವ ರೈತರು ಹಾಗೂ ಬಡ ಜನರ ನೆರವಿಗೆ ನಿಂತು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಅವರ ಸೇವಾ ಮನೋಭಾವ ಸದಾ ಸ್ಮರಣೀಯ.
ನಾನಾ ಪಾಟೇಕರ್ ಅವರ ಅಗಲಿಕೆಯಿಂದ ಭಾರತೀಯ ಚಿತ್ರರಂಗ, ಕಲಾ ಹಾಗೂ ಸಾಮಾಜಿಕ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬದವರು, ಸ್ನೇಹಿತರು ಮತ್ತು ಅಪಾರ ಅಭಿಮಾನಿ ಬಳಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಜಗದೀಶ್ ಶೆಟ್ಟರ್ ಅವರು ಪ್ರಾರ್ಥಿಸಿದ್ದಾರೆ.