ರಸ್ತೆ ಸುಧಾರಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ..

ರಸ್ತೆ ಸುಧಾರಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ..

ತಾತ್ಕಾಲಿಕವಲ್ಲದೇ ಗುಣಮಟ್ಟದ ರಸ್ತೆಗಾಗಿ ಬೇಡಿಕೆ..

ಬೆಳಗಾವಿ : ನಗರದ ಹಳೇ ಪಿಬಿ ರಸ್ತೆಯ ಯಡಿಯೂರಪ್ಪ ಮಾರ್ಗದಲ್ಲಿ ಹರಿಯಾಳಿ ಹೋಟೆಲ್‌ನಿಂದ ಅಲಾರವಾಡ ಅಂಡರ್‌ಬ್ರಿಡ್ಜ್ ವೃತ್ತದವರೆಗಿನ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ಗುಣಮಟ್ಟದ ಕಾಂಕ್ರೀಟ್ ಅಥವಾ ಡಾಂಬರ್ ರಸ್ತೆ ನಿರ್ಮಿಸುವಂತೆ ಆಗ್ರಹಿಸಿ ಸುತ್ತಮುತ್ತಲಿನ ಗ್ರಾಮಸ್ಥರು ಶುಕ್ರವಾರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಹಳಗಾ, ಅಲಾರವಾಡ, ಬಸ್ತವಾಡ, ಕೊಂಡಸಕೊಪ್ಪ, ಮಸ್ತಮರಡಿ, ತಾರಿಹಾಳ, ಶಾಗಣಮಟ್ಟಿ, ಶಿಂಧೋಳಿ ಹಾಗೂ ಬಸರಿ ಕಟ್ಟಿ ಗ್ರಾಮಗಳ ಜನರು ಪ್ರತಿನಿತ್ಯ ಬೆಳಗಾವಿ ನಗರಕ್ಕೆ ಸಂಚರಿಸಲು ಈ ರಸ್ತೆಯನ್ನು ಅವಲಂಬಿಸಿದ್ದಾರೆ. ಮಳೆಯಿಂದ ರಸ್ತೆ ಹದಗೆಟ್ಟು ದೊಡ್ಡ ಗುಂಡಿಗಳು ನಿರ್ಮಾಣವಾಗಿವೆ. ಲೋಕೋಪಯೋಗಿ ಇಲಾಖೆ ತಾತ್ಕಾಲಿಕವಾಗಿ ಗುಂಡಿ ಮುಚ್ಚಿದ್ದರೂ ಮತ್ತೆ ಗುಂಡಿಗಳು ಕಾಣಿಸಿಕೊಂಡಿದ್ದು, ವಾಹನ ಸವಾರರು ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗುತ್ತಿದ್ದಾರೆ ಎಂದು ದೂರಿದರು.

ಈ ಕುರಿತು ಆ. 11ರಂದು ಮನವಿ ಸಲ್ಲಿಸಿದ್ದರೂ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ. ಜಿಲ್ಲಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಮಹಾನಗರ ಪಾಲಿಕೆ, ಲೋಕೋಪಯೋಗಿ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಗುಣಮಟ್ಟದ ರಸ್ತೆ ನಿರ್ಮಿಸಲು ಸೂಚಿಸಬೇಕು ಎಂದು ಒತ್ತಾಯಿಸಿದರು.

10 ದಿನಗಳಲ್ಲಿ ಬೇಡಿಕೆ ಈಡೇರಿಸದಿದ್ದರೆ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆಯ ಶರತ ದೇಸಾಯಿ, ಎಂ.ಕೆ.ಕಾಂಬಳೆ, ಮೋಹನ ನಂದಿ, ಸದಾನಂದ ಬಿಳಗೋಜಿ, ಸಾಗರ ರಾಮನ್ನಾಚೆ, ಕಿರಣ ಹನುಮಂತಾಚೆ, ಸಾಗರ ಸಾಮಜೆ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *