ಪ್ರಾಣಿಗಳ ಮೇಲೆ ಕರುಣೆ ಜೊತೆ ಸಾರ್ವಜನಿಕರ ಸುರಕ್ಷತೆ ಎಲ್ಲರ ಜವಾಬ್ದಾರಿ.

ಪ್ರಾಣಿಗಳ ಮೇಲೆ ಕರುಣೆ ಜೊತೆ ಸಾರ್ವಜನಿಕರ ಸುರಕ್ಷತೆ ಎಲ್ಲರ ಜವಾಬ್ದಾರಿ..

ಮೇಯರ್ ಪ್ರೀತಿ ಕಾಮಕರ

ಬೆಳಗಾವಿ : ಪ್ರಾಣಿಗಳ ಬಗ್ಗೆ ಕರುಣೆ ತೋರುವುದು ನಮ್ಮ ಮಾನವೀಯತೆಯ ಪ್ರತಿಬಿಂಬವಾಗಿದ್ದು, ಸಾರ್ವಜನಿಕರ ಸುರಕ್ಷತೆಯೂ ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು
ಮೇಯರ್ ಪ್ರೀತಿ ಕಾಮಕರ್ ಹೇಳಿದರು.

ಮಹಾನಗರ ಪಾಲಿಕೆ,
ಜಿಲ್ಲಾ ಪ್ರಾಣಿ ದಯಾ ಸಂಘ, ಪಶುಪಾಲನೆ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಮಹಾನಗರ ಪಾಲಿಕೆಯಲ್ಲಿ ಆಯೋಜಿಸಲಾಗಿದ್ದ ಬೀದಿ ನಾಯಿಗಳ ಆಹಾರ ವಲಯಗಳ ಪ್ರಮಾಣಿತ ಕಾರ್ಯಾಚರಣೆ ವಿಧಾನ’ (ಎಸ್ಓಪಿ) ಕುರಿತ
ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ
ಅವರು, ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ನಿಯಂತ್ರಣಪೂರಿತವಾಗಿ ಅವುಗಳ ರಕ್ಷಣೆ ಜೊತೆಗೆ ಸಾರ್ವಜನಿಕರ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ
ಕಾರ್ಯಾಗಾರವು ದಿಕ್ಸೂಚಿ ಆಗಲಿದೆ ಎಂದು ಹೇಳಿದರು.

ಉಪಮೇಯರ್ ಹನುಮಂತ ಕೊಂಗಾಲಿ ಮಾತನಾಡಿ, ಆಹಾರ ವಲಯ ಸೇರಿದಂತೆ ಬೀದಿ ನಾಯಿಗಳ ರಕ್ಷಣೆಗೆ ಕೈಗೊಂಡಿರುವ ವ್ಯವಸ್ಥೆಗೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದ್ದು, ಅವುಗಳ ದಾಳಿಯಿಂದ ಜನರನ್ನು ರಕ್ಷಿಸುವುದೂ ಸಹ ಅಷ್ಟೇ ಮಹತ್ವದ್ದಾಗಿದೆ ಎಂದು ಹೇಳಿದರು.

ಪಾಲಿಕೆ ಆಯುಕ್ತ ಕಾರ್ತಿಕ್ ಎಂ ಮಾತನಾಡಿ, ಜಿಲ್ಲಾಧಿಕಾರಿಗಳ ಮಾರ್ಗದರ್ಶನ, ಪ್ರಾಣಿ ಪ್ರಿಯರ ಹಾಗೂ ಸಾರ್ವಜನಿಕರ ಸಲಹೆ ಸೂಚನೆಗಳಂತೆ ಬೀದಿ ನಾಯಿಗಳಿಗೆ ಆಹಾರ ನೀಡುವ ಮತ್ತು ಸಂರಕ್ಷಣಾ ವಲಯಗಳನ್ನು ಗುರುತಿಸಲಾಗುತ್ತಿದ್ದು, ಆ ಹಿನ್ನೆಲೆಯಲ್ಲಿ ಕಾರ್ಯಗಾರವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರಾಜು ಭಾತಕಾಂಡೆ, ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೇಯಸ್ ನಾಕಾಡಿ, ನಗರಸೇವಕರಾದ ರವಿ ಧೋತ್ರೆ, ಗಿರೀಶ ಧೋಂಗಡಿ, ಸಂದೀಪ ಜೀರಗ್ಯಾಳ, ಶಂಕರ ಪಾಟೀಲ ಇತರರು ಇದ್ದರು.

ಪಾಲಿಕೆ ಪರಿಸರ ವಿಭಾಗದ ಕಾರ್ಯಪಾಲಕ ಅಭಿಯಂತರ ಹನುಮಂತ ಕಲಾದಗಿ ಸ್ವಾಗತಿಸಿದರು.
ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆಯ
ಡಾ. ಶ್ರೀಕಾಂತ ಗಾವಿ ಪ್ರಾಸ್ತಾವಿಕ ಮಾತನಾಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿದ್ದ ಹ್ಯೂಮನ್ ವರ್ಲ್ಡ್ ಫಾರ್ ಎನಿಮಲ್ಸ್ ಪ್ರತಿನಿಧಿ ಭಜಂತ್ರಿ ಹಾಗೂ ಸೀಮಂತಿನಿ ಕಾರ್ಯಗಾರದಲ್ಲಿ ಪ್ರಾತ್ಯಕ್ಷಿಕೆ ಸಹಿತ ಮಾಹಿತಿ ನೀಡಿದರು.
ಪಾಲಿಕೆ ಪರಿಸರ ವಿಭಾಗದ ಅಭಿಯಂತರುಗಳಾದ ಅಶೋಕಕುಮಾರ ಸಜ್ಜನ್, ಪ್ರವೀಣಕುಮಾರ, ಆದಿಲ್ ಖಾನ್,
ಪೆಟಾ ಹಾಗೂ ಇನ್ನಿತರ ಸಂಘಟನೆಗಳ ಪದಾಧಿಕಾರಿಗಳು, ಪ್ರಾಣಿ ಪ್ರಿಯರು, ಸಾರ್ವಜನಿಕರು,
ಪಾಲಿಕೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿ ಕಾರ್ಯಗಾರದಲ್ಲಿ ಉಪಸ್ಥಿತರಿದ್ದರು.
ಬಸವರಾಜ ಕುಪ್ಪಸಗೌಡ್ರ ನಿರೂಪಿಸಿ ವಂದಿಸಿದರು.

Leave a Reply

Your email address will not be published. Required fields are marked *